ಶಿವಮೊಗ್ಗ LIVE
ಹೊಳೆಹೊನ್ನೂರು: ಕೌಟುಂಬಿಕ ಕಲಹದ (family dispute) ಹಿನ್ನೆಲೆ ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಹೊಳೆಹೊನ್ನೂರಿನ ಬೊಮ್ಮನ ಕಟ್ಟೆ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ರಸ್ತೆ ಬದಿ ನವಜಾತ ಗಂಡು ಶಿಶು, ವಾರಸುದಾರರ ಪತ್ತೆಗೆ ಮನವಿ
ಚಂದನಾ ಬಾಯಿ (23) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಪತಿ ಗೋಪಿ ಜೊತೆಗೆ ಜಗಳವಾಗಿತ್ತು. ಈ ಸಂದರ್ಭ ಆತ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಗೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





