ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ಪತ್ನಿ ಸಾವು ಪ್ರಕರಣದಲ್ಲಿ ಆರೋಪಿ ಗುರುರಾಜ್ನನ್ನು ಪಾಂಡಿಚೇರಿಯಲ್ಲಿ ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ (Arrest).
ನವೆಂಬರ್ 25ರಂದು ಪತಿಯ ಮನೆಯವರ ಕಿರುಕುಳ ತಾಳಲಾರದೆ ಡಿ.ಬಿ.ಹಳ್ಳಿಯ ನವವಿವಾಹಿತೆ ಲತಾ, ಹಂಚಿನಸಿದ್ದಾಪುರ ಬಳಿ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡು ದಿನದ ನಂತರ ಚನ್ನಗಿರಿ ತಾಲೂಕಿನ ಕಣಿವೆಬಿಳಚಿ ಗ್ರಾಮದ ಭದ್ರಾ ನಾಲೆಯಲ್ಲಿ ಶವ ಸಿಕ್ಕಿತ್ತು.
ಕಳೆದ ವರ್ಷ ಏಪ್ರಿಲ್ನಲ್ಲಿ ಶಿಕಾರಿಪುರದ ಗುರುರಾಜ್ನನ್ನು ಲತಾ ವಿವಾಹವಾಗಿದ್ದರು. ಭದ್ರಾವತಿ ತಾಲೂಕಿನ ಡಿ.ಬಿ ಹಳ್ಳಿಯ ಪರಮೇಶ್ವರಪ್ಪ ಮತ್ತು ರುದ್ರಮ್ಮ ದಂಪತಿಯ ಪುತ್ರಿ ಲತಾ ಮದುವೆಯಾದ ಏಳು ತಿಂಗಳಲ್ಲಿ ಗಂಡನ ಮನೆಯವರಿಂದ ಹಿಂಸೆ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ಪತಿ ಗುರುರಾಜ್ ತಲೆಮರೆಸಿಕೊಂಡಿದ್ದ.
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






