ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

 ಶಿವಮೊಗ್ಗ  LIVE 

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ (jail Inmate) ಇಂದು ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜನವರಿ 12ರ ರಾತ್ರಿ ಆರೋಗ್ಯ ಹದಗೆಟ್ಟಿದ್ದರಿಂದ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 3 ಗಂಟೆ ಹೊತಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sigandur-Janthre-2026-scaled.

ಬಸವ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರಾಮದ ನಿವಾಸಿ. 2019ರಲ್ಲಿ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಉಡುಪಿ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.

Shimoga-Jail-inmate-breathed-last

ಇದನ್ನೂ ಓದಿ » ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment