ಡಿಸಿಸಿ ಬ್ಯಾಂಕಿಗೆ ನುಗ್ಗಿದ ಜಿಂಕೆ ರಕ್ಷಣೆ, ಆಗಿದ್ದೇನು?

ಶಂಕರಘಟ್ಟ: ಡಿಸಿಸಿ ಬ್ಯಾಂಕ್‌ಗೆ (Bank Branch) ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್‌ ಶಾಖೆಗೆ ಜಿಂಕೆ ನುಗ್ಗಿದೆ. ಗಾಬರಿಯಲ್ಲಿ ಗಾಜಿಗೆ ಗುದ್ದಿಕೊಂಡು ಕುಸಿದು ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬಳಿಕ ಅದನ್ನು ಸಮೀಪದ ಅರಣ್ಯಕ್ಕೆ ಕೊಂಡೊಯ್ದು ಬಿಡುಗಡೆ ಮಾಡಿದ್ದಾರೆ.

Deer Enters DCC Bank in Shankaraghatta

Deer Enters DCC Bank in Shankaraghatta - Bank Branch

ಬೆನ್ನಟ್ಟಿ ಬಂದ ನಾಯಿಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಿಂದ ಜಿಗಿದು ಡಿಸಿಸಿ ಬ್ಯಾಂಕಿಗೆ ನುಗ್ಗಿದೆ. ಬ್ಯಾಂಕ್‌ ಸಿಬ್ಬಂದಿ ತಕ್ಷಣ ಗೇಟ್‌ಗಳನ್ನು ಬಂದ್‌ ಮಾಡಿ ಜಿಂಕೆಯನ್ನು ರಕ್ಷಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

Total-Readers-of-Shivamogga-Live

ಇದನ್ನೂ ಓದಿ – ಭದ್ರಾ ನಾಲೆಯಲ್ಲಿ ಒಬ್ಬರ ಮೃತದೇಹ ಪತ್ತೆ, ನಾಪತ್ತೆಯಾದ ಮೂವರಿಗೆ ಶೋಧ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment