ಗೋಪಿ ಸರ್ಕಲ್’ನಲ್ಲಿ ಬೀದಿ ಭಾಷಣ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಮಾಫಿಯಾ ವಿರುದ್ಧ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 3 ಅಕ್ಟೋಬರ್ 2019

https://www.facebook.com/ckdcinternational/videos/2433592173582988/?t=1

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್(ಎಸ್ಎಸ್ಎಫ್) ಶಿವಮೊಗ್ಗ ವಿಭಾಗದ ಕ್ಯೂ ಟಿಮ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿಜಿಯ ಕನಸು ನನಸಾಗಲಿ ಎಂಬ ಘೋಷಣೆಯೊಂದಿಗೆ ಗೋಪಿ ವೃತ್ತದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಹಾಗೂ ಬೀದಿ ಭಾಷಣ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಎಸ್ಎಸ್ಎಫ್ ರಾಜ್ಯ ಉಪಾಧ್ಯಕ್ಷ ಸುಫಿಯಾನ್ ಸಖಾಫಿ, ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಗೆ ಬಲಿಯಾಗಿ ಸುಂದರ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಲೇಜು ಕ್ಯಾಂಪಸ್’ಗಳಲ್ಲಿ ಮಾದಕದ್ರವ್ಯ ಮಾಫಿಯಾಗಳು ಹೆಚ್ಚಾಗುತ್ತಿವೆ. ಇವುಗಳನ್ನು ಕೂಡಲೇ ತಡೆಗಟ್ಟಬೇಕು. ಈ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇವೆ ಎಂದರು.

ಎಸ್ಎಸ್ಎಫ್ ರಾಜ್ಯ ಸದಸ್ಯರಾದ ಅಬ್ದುಲ್ ಲತೀಫ್ ಸಅದಿ, ಜಿಲ್ಲಾ ಅಧ್ಯಕ್ಷರಾದ ಡಿ.ಎಂ.ಮದನಿ, ಶಿವಮೊಗ್ಗ ಡಿವಿಷನ್ ಅಧ್ಯಕ್ಷ ರಹೀಂ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಅಕ್ಬರ್ ಶಿವಮೊಗ್ಗ , ಅಶ್ರಫ್ ಶಿವಮೊಗ್ಗ, ಕ್ಯೂ ಟೀಂ ಡಿವಿಷನ್ ಕಂಟ್ರೋಲರ್ ಸಾದತ್ ಶಿವಮೊಗ್ಗ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 3, 2019

Leave a Comment