ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದ ವಿದ್ಯಾನಗರ ಸಮೀಪದ ಹೊಸ ಮೇಲ್ಸೇತುವೆಗೆ ರೈತ ನಾಯಕ ಎನ್.ಡಿ. ಸುಂದರೇಶ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (letter to CM) ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಸಮೀಪದ ನಂಬಳದಲ್ಲಿ ಹುಟ್ಟಿ, ಭದ್ರಾವತಿ ತಾಲೂಕಿನ ಅಶೋಕ ನಗರವನ್ನು ಎನ್.ಡಿ. ಸುಂದರೇಶ್ ಅವರು ತಮ್ಮ ಕರ್ಮಭೂಮಿ ಮಾಡಿಕೊಂಡಿದ್ದರು. ಕರ್ನಾಟಕದ ರೈತ ಚಳವಳಿಯ ಧೀಮಂತ ನಾಯಕರು. ರೈತರ ಹಕ್ಕುಗಳಿಗಾಗಿ ನಾಲ್ಕು ದಶಕಗಳ ಕಾಲ ನಿರಂತರ ಹೋರಾಟ ಮಾಡಿದ್ದರು. ರೈತ ಸಮುದಾಯಕ್ಕೆ ಸ್ವಾಭಿಮಾನ ಮತ್ತು ಧೈರ್ಯ ತುಂಬಿದ್ದರು ಎಂದು ಕಿಮ್ಮನೆ ರತ್ನಾಕರ್ ಪತ್ರದಲ್ಲಿ ಸ್ಮರಿಸಿದ್ದಾರೆ.

Kimmane-Rathnakar-General-Image

ಸಮಾಜವಾದಿ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ಜೀವನದುದ್ದಕ್ಕೂ ಶ್ರಮಿಸಿದ ಸುಂದರೇಶ್ ಅವರ ವಿಚಾರಧಾರೆಗಳು ರಾಜ್ಯಾದ್ಯಂತ ಜನಮನ್ನಣೆ ಪಡೆದಿವೆ. ಶಿವಮೊಗ್ಗದಿಂದ ಹೊಳೆಹೊನ್ನೂರಿಗೆ ಹೋಗುವ ಮಾರ್ಗದಲ್ಲಿರುವ ವಿದ್ಯಾನಗರದ ಹೊಸ ಮೇಲ್ಸೇತುವೆಗೆ ಅವರ ಹೆಸರನ್ನು ಇಡುವ ಮೂಲಕ ಸರ್ಕಾರವು ಅವರಿಗೆ ಗೌರವ ಸಲ್ಲಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನದ ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ? ಇಲ್ಲಿದೆ ಡಿಟೇಲ್ಸ್‌

ಈ ಪತ್ರದ ಪ್ರತಿಗಳನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ರಾಘವೇಂದ್ರ ಅವರಿಗೂ ರವಾನಿಸಲಾಗಿದೆ.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment