ಶಿವಮೊಗ್ಗ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಸಂಚಾರ ಪೊಲೀಸ್ ಅಧಿಕಾರಿಗಳು ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಸಮೀಪ ವಿಶೇಷ ಕಾರ್ಯಾಚರಣೆ ನಡೆಸಿದರು. ತಪಾಸಣೆ ಸಂದರ್ಭ ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುತ್ತಿದ್ದ ಸವಾರರಿಗೆ ದಂಡ ವಿಧಿಸಲಾಯಿತು. (noisy silencers)
ಇದೇ ಕಾರ್ಯಾಚರಣೆಯಲ್ಲಿ ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್ಗಳನ್ನು ಅಳವಡಿಸಿಕೊಂಡಿದ್ದ 5 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಿದರು.

ಇದನ್ನೂ ಓದಿ – ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್







