ಹೊಳೆಹೊನ್ನೂರು: ಅರಬಿಳಚಿ ಕ್ಯಾಂಪ್ನಲ್ಲಿ ನಡೆದ ಭದ್ರಾ ನಾಲೆ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಎರಡನೇ ಮೃತದೇಹ (Second body) ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ನೀಲಾಬಾಯಿ (55) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂದು ಎಸ್ಡಿಆರ್ಎಫ್ (SDRF) ತಂಡ ಕಾರ್ಯಾಚರಣೆ ನಡೆಸಿ ಅರಬಿಳಚಿ ಕ್ಯಾಂಪ್ ಸಮೀಪದ ನಾಲೆಯಲ್ಲಿ ನೀಲಾಬಾಯಿ ಅವರ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದೆ. ಕಳೆದ ಭಾನುವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು.

ಇದನ್ನೂ ಓದಿ – ಮದ್ಯದ ಅಮಲು, ರಸ್ತೆ ಬದಿ ಕಾರಿನಲ್ಲೇ ಮಗುವಿನ ಜೊತೆ ಮಲಗಿದ ತಂದೆ, ಮುಂದೇನಾಯ್ತು?
ಈ ಹಿಂದೆ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡವು ನೀಲಾಬಾಯಿ ಅವರ ಪುತ್ರ ರವಿಕುಮಾರ್ ಅವರ ಶವವನ್ನು ಹೊರತೆಗೆದಿತ್ತು. ಸದ್ಯ ಇಬ್ಬರ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಶ್ವೇತಾ ಹಾಗೂ ಪರಶುರಾಮ್ ದಂಪತಿ ಪತ್ತೆಗಾಗಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎಸ್ಡಿಆರ್ಎಫ್ ತಂಡಗಳು ನಾಲ್ಕನೇ ದಿನವೂ ಶೋಧ ಕಾರ್ಯ ತೀವ್ರಗೊಳಿಸಿವೆ.

LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





