ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ (Central Jail) ಕೈದಿಗಳ ಎರಡು ಗುಂಪುಗಳ ಮಧ್ಯೆ ಜಗಳವಾಗಿದ್ದು, ಕೆಲವು ಕೈದಿಗಳ ಮೇಲೆ ಹಲ್ಲೆ ನಡೆದಿದೆ. ಶರಾವತಿ ವಿಭಾಗದ ಸೊಹೈಲ್ ಅಹ್ಮದ್ ಮತ್ತು ಮೊಹ್ಮದ್ ಜುನೈದ್ ಎಂಬುವವರು ಟವರ್ ವಿಭಾಗದ ಬಳಿ ಬಂದಾಗ ಅನ್ವರ್ ಎಂಬಾತನೊಂದಿಗೆ ಮಾತಿನ ಚಕಮಕಿ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಂತರ ಅನ್ವರ್ ಮತ್ತು ಆತನ ಸಹಚರರು ಭದ್ರಾ ವಿಭಾಗದ ಕೊಠಡಿಗೆ ತೆರಳಿ ಸೊಹೈಲ್ ಮತ್ತು ಜುನೈದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗಾಯಗೊಂಡ ಕೈದಿಗಳನ್ನು ಚಿಕಿತ್ಸೆಗಾಗಿ ಕಾರಾಗೃಹದ ಆಸ್ಪತ್ರೆಗೆ ದಾಖಲಿಸಿದಾಗ, ಆರೋಪಿಗಳಾದ ತನ್ವೀರ್, ಅನ್ವರ್, ಸೈಯದ್ ಇಷಾಖ್ ಮತ್ತು ವಸೀಂ ಅಕ್ರಂ ಆಸ್ಪತ್ರೆಯ ಮುಂಭಾಗಕ್ಕೆ ಬಂದು ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ
ಈ ಸಂದರ್ಭ ಬಂದಿ ಅನ್ವರ್ ಎಂಬಾತ ಹೂವಿನ ಕುಂಡದಿಂದ ಹೊಡೆಯಲು ಯತ್ನಿಸಿ, ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ತಕ್ಷಣವೇ ಮಧ್ಯಪ್ರವೇಶಿಸಿದ ಕಾರಾಗೃಹದ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಿ ಅಹಿತಕರ ಘಟನೆ ನಡೆಯದಂತೆ ತಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅಧೀಕ್ಷಕಿ ಪ್ರೀತಿ ಆರ್. ಅವರು ನೀಡಿದ ದೂರಿನ ಮೇರೆಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ವೀರ್, ಅನ್ವರ್, ಸೊಹೈಲ್ ಅಹ್ಮದ್, ಮೊಹ್ಮದ್ ಜುನೈದ್, ಮೊಹ್ಮದ್ ಇಮ್ರಾನ್, ಸೈಯದ್ ಇಷಾಖ್, ವಸೀಂ ಅಕ್ರಂ ಮತ್ತು ಫರ್ದೀನ್ ಶೇಖ್ ಎಂಬವವರು ವಿರುದ್ದ ಪ್ರಕರಣ ದಾಖಲಾಗಿದೆ.
LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






