ಶಿವಮೊಗ್ಗ: ಗೋಬಿ ತಿಂದು ವಾಪಾಸಾಗುವಾಗ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ (bike accident) ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ. ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ದರ್ಶನ್.ಕೆ (18) ತನ್ನ ಬೈಕ್‌ನಲ್ಲಿ ಸ್ನೇಹಿತ ಪುವರಸ ಎಂಬಾತನನ್ನು ಕೂರಿಸಿಕೊಂಡು ಶಿವಮೊಗ್ಗ-ಹೊನ್ನಾಳಿ ರಸ್ತೆಯಲ್ಲಿ ತೆರಳುತ್ತಿದ್ದನು. ಗೊಂದಿಚಟ್ನಹಳ್ಳಿ ಗ್ರಾಮದ ಬಳಿ ಬರುತ್ತಿದ್ದಂತೆ ದರ್ಶನ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿದ್ದ ದರ್ಶನ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಆತ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಾಯಗೊಂಡಿರುವ ಪುವರಸ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಥಸಂಚಲನ ಮುನ್ನಡೆಸಿದ ಮಹಿಳಾ ಐಪಿಎಸ್ ಅಧಿಕಾರಿ, ಗಮನ ಸೆಳೆದ ಕನ್ನಡದ ಕಮಾಂಡ್

LATEST NEWS
- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

- ನದಿಗಳಿಗೆ ಕಸಾಯಿಖಾನೆಯ ತ್ಯಾಜ್ಯ, ಅರುಣ್ ಕಳವಳ

About The Editor
ನಿತಿನ್ ಆರ್.ಕೈದೊಟ್ಲು





