ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಷೇರು ಮಾರುಕಟ್ಟೆ ಮತ್ತು ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ ಸೈಬರ್ ವಂಚಕರು (cyber fraudsters), ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹61 ಲಕ್ಷ ವಂಚಿಸಿದ್ದಾರೆ. ಖಾಸಗಿ ಕಂಪನಿಯ ಹೆಸರಿನಲ್ಲಿ ನಕಲಿ ಜಾಲ ಸೃಷ್ಟಿಸಿ ಬೃಹತ್ ಮೊತ್ತದ ಹಣ ಲೂಟಿ ಮಾಡಲಾಗಿದೆ.
ಇದನ್ನೂ ಓದಿ – ಗೋಬಿ ತಿಂದು ವಾಪಸ್ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?
ಅಪರಿಚಿತ ವ್ಯಕ್ತಿಗಳು ಒಂದು ಕಂಪನಿಯ ಪ್ರತಿನಿಧಿಗಳಂತೆ ನಟಿಸಿ ಶಿವಮೊಗ್ಗದ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ತಮ್ಮ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ, ಚಿನ್ನ ಮತ್ತು ಷೇರು ಮಾರುಕಟ್ಟೆಯಲ್ಲಿ ವಿನಿಯೋಗಿಸಿ ಹೆಚ್ಚಿನ ಲಾಭ ತಂದುಕೊಡುವುದಾಗಿ ಆಮಿಷ ಒಡ್ಡಿದ್ದಾರೆ. ಇದನ್ನು ನಂಬಿದ ಶಿವಮೊಗ್ಗದ ವ್ಯಕ್ತಿ 2025ರ ಜುಲೈ 16 ರಿಂದ ಡಿಸೆಂಬರ್ 12ರವರೆಗೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಒಟ್ಟು ₹61,00,000 ವರ್ಗಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಂಚಕರು ಹಣ ಪಡೆದ ತಕ್ಷಣ ನೀಡಿದ್ದ ಯುಪಿಐ ಐಡಿಗಳನ್ನು ಡಿಲೀಟ್ ಮಾಡಿ ಸಾಕ್ಷ್ಯ ನಾಶಪಡಿಸಿದ್ದಾರೆ. ದೂರುದಾರರಿಗೆ ಯಾವುದೇ ಲಾಭಾಂಶ ನೀಡದೆ, ಅಸಲು ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















