ಶಿವಮೊಗ್ಗ: ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ (bike rider) ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೊಸ ಹೊನ್ನಾಪುರ ಗ್ರಾಮದ ರಸ್ತೆಯಲ್ಲಿ ಶಬೀರ್ ಅಹಮದ್ ಅವರು ತಮ್ಮ ಬೈಕ್‌ನಲ್ಲಿ ಸ್ನೇಹಿತ ಕೆ.ಎಂ. ಅಜೀಜುದ್ದೀನ್ ಅವರನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಟಾಟಾ ಪಂಚ್ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶಬೀರ್ ಅಹಮದ್ ಅವರು ಕೊನೆಯುಸಿರೆಳೆದಿದ್ದಾರೆ.

ಕಾರು ಚಾಲಕ ರಾಮಚಂದ್ರ ಎಂಬುವವರ ವಿರುದ್ಧ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗೋಬಿ ತಿಂದು ವಾಪಸ್ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?

LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





