KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ (KFD) ಸೋಂಕಿತರೊಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್‌ ಬಸ್ಸು, ಅದೃಷ್ಟವಶಾತ್‌ ಪ್ರಯಾಣಿಕರು ಪಾರು, ಆಗಿದ್ದೇನು?

ಯುವಕ ಜನವರಿ 20 ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯುವಕ ಕೊನೆಯುಸಿರೆಳೆದಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್‌ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ)

Total-Readers-of-Shivamogga-Live
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 28, 2026 at 11:43 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 28, 2026

Leave a Comment