ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್‌ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಸದಾ ಶೈಕ್ಷಣಿಕ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು (College students) ಸಂಚಾರಿ ಪೊಲೀಸರಾಗಿ ಬದಲಾಗಿದ್ದರು. ವಿವಿಧ‌ ವೃತ್ತಗಳಿಗೆ ತೆರಳಿ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿ ಜೊತೆ ಶ್ರಮಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್‌ ಬಸ್ಸು, ಅದೃಷ್ಟವಶಾತ್‌ ಪ್ರಯಾಣಿಕರು ಪಾರು, ಆಗಿದ್ದೇನು?

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಕಮಲಾ ನೆಹರು ಮಹಿಳಾ‌ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 37 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ – 2026 ಅಂಗವಾಗಿ ಸರಣಿ ಕಾನೂನು ಅರಿವು ಕಾರ್ಯಕ್ರಮ ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು.

-ATNCC-Student-Control-Traffic-at-Mahaveera-circle

ಎ.ಟಿ.ಎನ್.ಸಿ.ಸಿ ಹಾಗೂ ಕಮಲಾ‌ ನೆಹರು ಕಾಲೇಜಿನ ಎನ್.ಸಿ.ಸಿ ಹಾಗೂ ರೇಂಜರ್ಸ್ ರೋವರ್ಸ್ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ಮಹಾವೀರ ವೃತ್ತದಲ್ಲಿ ನಿಂತು ಕೈ ಸಂಕೇತಗಳನ್ನು ತೋರಿಸುತ್ತ ಸಂಚಾರ ದಟ್ಟಣೆ ನಿಯಂತ್ರಿಸಿದರು. ಬಿತ್ತಿ ಪತ್ರಗಳನ್ನು ಪ್ರದರ್ಶಿಸಿ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಿದರು. ಜೀಬ್ರಾ ಲೈನ್ ದಾಟಿದ ಸವಾರರಿಗೆ, ವೃತ್ತದಲ್ಲಿ ಸರಿಯಾಗಿ ನಿಲ್ಲುವ ಬಗೆ ವಿವರಿಸುತ್ತಾ, ಅವಸರವೇ ಅಪಘಾತಕ್ಕೆ ಕಾರಣವೆಂದು ತಿಳಿಹೇಳಿದರು.

“8ನೇ ತರಗತಿಯಲ್ಲಿ ಸ್ಕೌಟ್ಸ್ ಮೂಲಕ ಸಂಚಾರಿ ಪೊಲೀಸರೊಂದಿಗೆ ಕೆಲ ಸಮಯ ಕಾರ್ಯನಿರ್ವಹಿಸುವ ಅವಕಾಶ ದೊರಕಿತ್ತು. ಅದು ಸಂಚಾರಿ ನಿಯಮದ ಬಗ್ಗೆ ನಮ್ಮೊಳಗೆ ಜಾಗೃತಿ ಮೂಡಿಸಿತ್ತು. ಅಂತಹ ಸಂದರ್ಭವನ್ನು, ವಿದ್ಯಾರ್ಥಿಗಳ ಮೂಲಕ ಪುನರ್ ಪ್ರಯೋಗ ಮಾಡುವ ಕಾರ್ಯದಲ್ಲಿ ನಿರತರಾಗಿದ್ದೇವೆ.”
ಎಂ.ಎಸ್.ಸಂತೋಷ್ ನ್ಯಾಯಾಧೀಶರು
“ಸಂಚಾರಿ ಪೊಲೀಸರು ಬಿಸಿಲು ಮಳೆ ಲೆಕ್ಕಿಸದೆ ಜನರನ್ನು ಸುರಕ್ಷಿತವಾಗಿಡುವ ಕಾರ್ಯ ನಡೆಸುತ್ತಿದ್ದಾರೆ. ಕಾನೂನು ಉಲ್ಲಂಘನೆ ಎಂಬುದು ಯುವ ಸಮೂಹದಲ್ಲಿ, ಒಂದು ರೀತಿಯ ಆಕರ್ಷಣಿಯ ಮನೋಭಾವವಾಗಿ ಕಾಡುತ್ತಿದೆ‌. ರಸ್ತೆ ಸುರಕ್ಷತಾ ಕಾನೂನುಗಳನ್ನು ಅನುಸರಿಸುವುದು ಮೂಲಭೂತ ಕರ್ತವ್ಯವಾಗಬೇಕು. ಆಗ ಮಾತ್ರ ಬದುಕಿನಲ್ಲಿ ಬದಲಾವಣೆ ಸಾಧ್ಯ.”
ಎಸ್.ಎನ್.ನಾಗರಾಜ ಕಾರ್ಯದರ್ಶಿ, ರಾಷ್ಟ್ರೀಯ ಶಿಕ್ಷಣ ಸಮಿತಿ
“ಶಿವಮೊಗ್ಗ ನಗರದಲ್ಲಿಯೇ 3 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ವಾಹನಗಳಿವೆ. ಇಂಟಲಿಜೆನ್ಸ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ ಸಹಾಯದಿಂದ, ನಮ್ಮ ಕಂಟ್ರೋಲ್ ರೂಂ ಮೂಲಕವೇ ನಗರದಲ್ಲಿ ನಡೆಯುವ ಪ್ರತಿ ಸಂಚಾರಿ ಕಾನೂನು ಉಲ್ಲಂಘನೆಗಳ ಮೇಲೆ ತೀವ್ರ ನಿಗಾ ಇಟ್ಟಿದ್ದೇವೆ. ಮುಂದೆ ಐದು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾದಲ್ಲಿ, ಡಿಎಲ್ ರದ್ದು ಪಡಿಸುವಂತಹ ಕಾನೂನು ಅನುಷ್ಟಾನಗೊಳ್ಳಲಿದೆ.”
ದೇವರಾಜ್ ಇನ್ಸ್‌ಪೆಕ್ಟರ್, ಸಂಚಾರಿ ಪೊಲೀಸ್ ಠಾಣೆ

ಎ.ಟಿ.ಎನ್.ಸಿ ಕಾಲೇಜು ವಿಶೇಷ ಕರ್ತವ್ಯಾಧಿಕಾರಿ ಡಾ.ಆರ್.ಎಂ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಸಾದ್ವಿ ಕಾಮತ್, ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಿ.ಎಚ್.ಮುನೇಶಪ್ಪ ಸಂಚಾರ ನಿಯಂತ್ರಣಕ್ಕಾಗಿ ಪೋಲಿಸರು ಬಳಸುವ ವಿವಿಧ ಕೈ ಸಂಕೇತಗಳ ಪ್ರಾತ್ಯಕ್ಷಿಕೆ ನೀಡಿದರು.

-ATNCC-Student-Control-Traffic-at-Mahaveera-circle
-ATNCC-Student-Control-Traffic-at-Mahaveera-circle
-ATNCC-Student-Control-Traffic-at-Mahaveera-circle
Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment