ಶಿವಮೊಗ್ಗ: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ (C.J. Roy) ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಯ್ ಆತ್ಮಹತ್ಯೆ ಬಗ್ಗೆ ಇನ್ನೂ ಕುಟುಂಬದವರೇ ದೂರು ನೀಡಿಲ್ಲ. ಅಷ್ಟರಲ್ಲೇ ರಾಜ್ಯ ಸರ್ಕಾರ ತರಾತುರಿಯಲ್ಲಿ ರಾಯ್ ಅವರ ಆಪ್ತ ಜಾರ್ಜ್ ದೂರಿನ ಆಧಾರದ ಮೇರೆಗೆ ಎಸ್‌ಐಟಿ ರಚಿಸಿದೆ. ಹಿಂದೆಯೂ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ಬಗ್ಗೆ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ನುಣುಚಿಕೊಳ್ಳುವ ಯತ್ನ ನಡೆಸಿತ್ತು. ಅದೇ ರೀತಿ ಇಲ್ಲಿಯೂ ಎಸ್‌ಐಟಿ ರಚನೆ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದರು.

ಕೇಂದ್ರ ಸರ್ಕಾರ ಇ.ಡಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸುತ್ತಿದ್ದಾರೆ. ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದ್ದಾರೆ. ರಾಯ್ ಅವರ ಅಂತ್ಯಕ್ರಿಯೆ ಮುಗಿಸುವುದರೊಳಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡುತ್ತಿರುವುದು ಮತ್ತಷ್ಟು ಅನುಮಾನ ಮೂಡಿಸಿದೆ. ತಪ್ಪುಗಳನ್ನು ಮುಚ್ಚಿಹಾಕಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ ಎಂದು ದೂರಿದರು.

ಇದನ್ನೂ ಓದಿ – ಗುಡ್ಡೇಕಲ್‌ನಲ್ಲಿ ತೈಪೂಸಂ ಜಾತ್ರೆ, ಹಾಲಿನ ಕುಂಭ ಹೊತ್ತು ಮಹಿಳೆಯರ ಮೆರವಣಿಗೆ, ಜಾತ್ರೆಯ ವಿಶೇಷವೇನು?







