ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕೆಎಫ್ಡಿಗೆ ಒಬ್ಬರು ಬಲಿಯಾಗಿದ್ದು, ಈ ಕಾಯಿಲೆ ಬಗ್ಗೆ ಎಸ್ ಒಪಿ ಹೊರಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಾವು ತಡೆಗಟ್ಟಲು ಎಚ್ಚರ ವಹಿಸುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ (Health Minister) ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೆಎಫ್ಡಿ ಲಸಿಕೆ ಸಂಶೋಧನೆ ಜತೆ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಮುಂದಿನ ವರ್ಷ ಕೆಎಫ್ಡಿಗೆ ಲಸಿಕೆ ಸಿಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ವ್ಯಕ್ತಪಡಿಸಿದರು. ಜ್ವರ ಬಂದ ಕೂಡಲೇ ಸ್ಥಳೀಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸೂಚನೆ ನೀಡಲಾಗಿದೆ. ಬಿಪಿಎಲ್, ಎಪಿಎಲ್ ಎಲ್ಲರಿಗೂ ಚಿಕಿತ್ಸೆ ಕೊಡುವ ಕೆಲಸ ಆಗುತ್ತಿದೆ ಎಂದರು.


ಇದನ್ನೂ ಓದಿ – ಶಿವಮೊಗ್ಗದ ಮೂವರಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ, ₹12,000 ದಂಡ, ಕಾರಣವೇನು?







