ಹೊಳಲೂರು ಬಳಿ ಅಪಘಾತ, ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಹೊಳಲೂರು ಗ್ರಾಮದ ಹರಮಘಟ್ಟ ಕ್ರಾಸ್ ಬಳಿ ಟ್ರಾಕ್ಟರ್ (Tractor) ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಾಕ್ಟರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಘಟನೆಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ರುದ್ರಪ್ಪ, ತಮ್ಮ ಹೆಂಡತಿ ರೇಣುಕಮ್ಮ ಮತ್ತು ಸೊಸೆ ಅಕ್ಷತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಹೊಳಲೂರು ಕಡೆಯಿಂದ ಬರುತ್ತಿದ್ದರು. ಈ ವೇಳೆ ಹರಮಘಟ್ಟ ಕ್ರಾಸ್ ಬಳಿ ಎದುರಿನಿಂದ ಬಂದ ಟ್ರಾಕ್ಟರ್ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಮಹಿಳೆಯರೆ ಹುಷಾರ್‌, ಶಿವಮೊಗ್ಗದಲ್ಲಿ ಡಬ್ಬಿ ಚಮತ್ಕಾರ, ಮರಳಾದರೆ ಚಿನ್ನಾಭರಣವೇ ಮಾಯ, ಏನಿದು?

ACCIDENT-NEWS-GENERAL-IMAGE.

ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರೂ ರಸ್ತೆಗೆ ಬಿದ್ದು ಕೈಕಾಲು ಮತ್ತು ಮುಖಕ್ಕೆ ತೀವ್ರ ಸ್ವರೂಪದ ಗಾಯವಾಗಿದೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸೊಸೆ ಅಕ್ಷತಾ ಅವರನ್ನು ಖಾಸಗಿ ಆಸ್ಪತ್ರೆಯ ಐಸಿಯು ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಟ್ರಾಕ್ಟರ್‌ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-COLLEGE-ADVT.

Leave a Comment