ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್‌ಮನ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ: ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಆನ್‌ಲೈನ್ ಸ್ಟೋರ್ ತೆರೆಸುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಸುಮಾರು ₹52.93 ಲಕ್ಷ (investment) ದೋಚಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸೇಲ್ಸ್‌ಮನ್‌ ಒಬ್ಬರಿಗೆ ಪೂಜಾ ಗೌಡ ಹೆಸರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ wwishvipstore ಎಂಬ ವೆಬ್ ಲಿಂಕ್ ಕಳುಹಿಸಿದ್ದರು. ಈ ಲಿಂಕ್ ಮೂಲಕ ಆನ್‌ಲೈನ್ ಸ್ಟೋರ್ ಓಪನ್ ಮಾಡಿ, ಅದರಲ್ಲಿ ವಸ್ತುಗಳನ್ನು ಆರ್ಡರ್ ಮಾಡಿ ಪಿಕಪ್ ಮಾಡುವ ಕೆಲಸ ನೀಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಇದನ್ನು ನಂಬಿದ ಸೇಲ್ಸ್‌ಮನ್‌ ವಿವಿಧ ಹಂತಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ.

SMS-Fraud-Shimoga-CEN-Police-Station.

ಆರಂಭದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಲಾಭ ಬಂದಂತೆ ತೋರಿಸಿದ್ದಾರೆ. ನಂತರ ಆ ಹಣವನ್ನು ವಿತ್‌ಡ್ರಾ ಮಾಡಲು ಹೋದಾಗ ತಾಂತ್ರಿಕ ಕಾರಣ ನೀಡಿ ತಡೆಹಿಡಿಯಲಾಗಿದೆ. ತೆರಿಗೆ ಹಾಗೂ ಪೆನಾಲ್ಟಿ ಹೆಸರಿನಲ್ಲಿ ಮತ್ತೆ ಹಣ ಹಾಕಿಸಿಕೊಂಡ ಆರೋಪಿಗಳು, ಒಟ್ಟು ₹52,93,646 ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ವಾಪಸ್ ಬರಬಹುದು ಎಂದು ಕಾಯುತ್ತಿದ್ದ ದೂರುದಾರರಿಗೆ ತಾವು ವಂಚನೆಗೆ ಒಳಗಾಗಿರುವುದು ತಡವಾಗಿ ಅರಿವಿಗೆ ಬಂದಿದೆ.

ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

JNNCE-COLLEGE-ADVT.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 5, 2026

Leave a Comment