ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದಿಂದ ಫೆಬ್ರವರಿ 7, 8ರಂದು ಬಾಪೂಜಿ ನಗರ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ (Cricket) ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ಕಿರಣ್ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಅಂಗವಾಗಿ ಮೊದಲ ಬಾರಿ ಬಳಗದಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಪಂದ್ಯಾವಳಿಗೆ ನೋಂದಣಿ ಮಾಡಿಕೊಂಡ 40 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಪಂದ್ಯಗಳು ನಡೆಯಲಿವೆ. ₹2,000 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ ಎಂದರು.
ಹೇಗಿರಲಿದೆ ಪಂದ್ಯ? ಏನೆಲ್ಲ ಬಹುಮಾನ?
- ಪ್ರತಿ ಪಂದ್ಯ ಐದು ಓವರ್ಗಳಿಗೆ ಸೀಮಿತವಾಗಿರುತ್ತದೆ.
- ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ಬಹುಮಾನವಾಗಿ 30 ಕೆಜಿ ತೂಕದ ಎರಡು ಟಗರು
- ದ್ವಿತೀಯ ಬಹುಮಾನವಾಗಿ 30 ಕೆಜಿಯ ಒಂದು ಟಗರು, ತೃತೀಯ ಬಹುಮಾನವಾಗಿ ₹10,001 ನಗದು ಹಾಗೂ ಟ್ರೋಫಿ ನೀಡಲಾಗುವುದು
ಸುದ್ದಿಗೋಷ್ಠಿಯಲ್ಲಿ ಪವನ್, ರಘು, ಸಂಜಯ್, ಶಿವು, ಶ್ರೀಧರ್, ಸುಮನ್, ಶಬರೀಶ್ ಮತ್ತಿತರರಿದ್ದರು.
ಇದನ್ನೂ ಓದಿ – MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ








