ಶಿವಮೊಗ್ಗ: ರಾಜ್ಯದ ಮಹಿಳಾ ಸರ್ಕಾರಿ ನೌಕರರ (Women Employees) ಬೇಡಿಕೆಗಳು ಹಾಗೂ ಅವರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಟನೆ ಸ್ಥಾಪಿಸಲಾಗಿದೆ. ಶಿವಮೊಗ್ಗ, ಮಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಘಟಕ ರಚಿಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಶಿನಿ ಗೌಡ, ಮಹಿಳಾ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆ ಸ್ಥಾಪಿಸಲಾಗಿದೆ. ಇದು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪರ್ಯಾಯವಲ್ಲ ಎಂದು ಸ್ಪಷ್ಟಪಡಿಸಿದರು.
ರೋಶಿನಿ ಗೌಡ ಏನೆಲ್ಲ ಹೇಳಿದರು?
1 ಸಂಘದ ಸತತ ಪ್ರಯತ್ನದಿಂದಾಗಿ ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ರಜೆಮಂಜೂರಾಗಿದೆ. ಇದೇ ಮಾದರಿಯಲ್ಲಿ ಗರ್ಭಿಣಿ ನೌಕರರಿಗೆ ವೇತನ ಸಹಿತ ವಿಶೇಷ ಸಾಂದರ್ಭಿಕ ರಜೆ ನೀಡಬೇಕು ಹಾಗೂ ಮಾತೃತ್ವ ರಜೆಯನ್ನು ಒಂದು ವರ್ಷಕ್ಕೆ ವಿಸ್ತರಿಸಬೇಕು. ಸೆಪ್ಟೆಂಬರ್ 13 ರಂದು ರಾಜ್ಯದ ಮಹಿಳಾ ನೌಕರರ ದಿನಾಚರಣೆ ಎಂದು ಅಧಿಕೃತವಾಗಿ ಘೋಷಿಸಬೇಕು.2 ಮಹಿಳಾ ಅಧಿಕಾರಿಗಳ ರಕ್ಷಣೆಗೆ ಕಡ್ಡಾಯವಾಗಿ ಮಹಿಳಾ ಚಾಲಕರನ್ನೇ ನೇಮಕ ಮಾಡಬೇಕು. ಇದು ಮಹಿಳಾ ನೌಕರರ ಮೇಲೆ ನಡೆಯುವ ದೌರ್ಜನ್ಯ ಮತ್ತು ಕಿರುಕುಳ ತಡೆಯಲು ಸಹಕಾರಿ ಆಗಲಿದೆ.3 ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ತಾಯಂದಿರ ಅನುಕೂಲಕ್ಕಾಗಿ ಸುಸಜ್ಜಿತ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಬೇಕು.4 8ನೇ ವೇತನ ಆಯೋಗದ ಶಿಫಾರಸುಗಳನ್ನು ತಕ್ಷಣ ಜಾರಿಗೆ ತರಬೇಕು. ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (OPS) ಅನ್ನು ಪುನಃಸ್ಥಾಪಿಸಬೇಕು.
ರಾಜ್ಯದಲ್ಲಿ ಸುಮಾರು 2.5 ಲಕ್ಷ ಮಹಿಳಾ ನೌಕರರು ಇದ್ದಾರೆ. ಅವರನ್ನೆಲ್ಲ ಮಹಿಳಾ ನೌಕರರ ಸಂಘದ ಸದಸ್ಯರಾಗಬಹುದು. ವೆಬ್ಸೈಟ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬಹುದು. ಸದಸ್ಯತ್ವ ಶುಲ್ಕ ₹100 ಇರಲಿದೆ ಎಂದು ರೋಶಿನಿ ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಗೌರವಾಧ್ಯಕ್ಷೆ ಗೀತಾ ಮಣಿ, ರಾಜ್ಯ ಖಜಾಂಚಿ ಡಾ. ವೀಣಾ ಕೃಷ್ಣಮೂರ್ತಿ ಇದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ