ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ದರೋಡೆಗೆ ಸಂಚು ರೂಪಿಸಿ ಪೊಲೀಸರ (police) ಮೇಲೆಯೇ ಮಾರಣಾಂತಿಕ ದಾಳಿ ನಡೆಸಿದ ರೌಡಿ ಶೀಟರ್ ಡಿಚ್ಚಿ ಮುಬಾರಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ರೌಡಿ ಡಿಚ್ಚಿ ಮುಬಾರಕ್ ಹಾಗೂ ಆತನ ಸಹಚರರು ಶಿವನಿ ಕ್ರಾಸ್ ಮತ್ತು ಗೌರಾಪುರ ಭಾಗದಲ್ಲಿ ದರೋಡೆಗೆ ಹಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಎಕ್ಸ್‌ಯುವಿ ಹಾಗೂ ಸ್ಕೂಟಿಗಳಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡತ್ತಿದ್ದಾರೆ ಎಂದು ಫೆಬ್ರವರಿ 7ರ ಮಧ್ಯಾಹ್ನ ಭದ್ರಾವತಿ ಡಿವೈಎಸ್‌ಪಿ ಪ್ರಕಾಶ್ ರಾಠೋಡ್ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ಕಾರ್ಯಾಚರಣೆಗೆ ವಿಶೇಷ ತಂಡ ರಚಿಸಲಾಗಿತ್ತು.
ಕಾರ್ಯಾಚರಣೆ ವೇಳೆ ದಾಳಿ
ಹೊಸಮನೆ ಠಾಣೆಯ ಪಿಎಸ್‌ಐ ಸಿದ್ದಪ್ಪ ಎಂ.ಪಿ, ಪೇಪರ್ ಟೌನ್ ಪಿಎಸ್‌ಐ ಕೃಷ್ಣಕುಮಾರ್ ಬಿ.ಮಾನೆ ಹಾಗೂ ನ್ಯೂಟೌನ್ ಪಿಎಸ್‌ಐ ರಮೇಶ್ ಅವರ ನೇತೃತ್ವದ ವಿಶೇಷ ತಂಡ ಶನಿವಾರ ಸಂಜೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತು. ಈ ವೇಳೆ ತಂಡವು ಡಿಚ್ಚಿ ಮುಬಾರಕ್ ಮತ್ತು ಆತನ ಸಹಚರರನ್ನು ಸುತ್ತುವರಿದಾಗ, ಆರೋಪಿಗಳು ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಕಲ್ಲು ಮತ್ತು ಚಾಕುಗಳಿಂದ ಮನಬಂದಂತೆ ದಾಳಿ ನಡೆಸಿದ್ದಾರೆ.

ಪಿಎಸ್‌ಐ ಕಾಲಿನ ಮೂಳೆ ಕಟ್
ಆರೋಪಿಗಳ ದಾಳಿಯಿಂದಾಗಿ ಹೊಸಮನೆ ಠಾಣೆ ಪಿಎಸ್‌ಐ ಸಿದ್ದಪ್ಪ ಎಂ.ಪಿ ಅವರ ಕಾಲಿನ ಮೂಳೆ ಮುರಿದಿದೆ. ಚಾಕುವಿನಿಂದ ಕೈಗೆ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಮತ್ತೊಬ್ಬ ಪಿಎಸ್‌ಐ ಕೃಷ್ಣಕುಮಾರ್ ಅವರ ಕೈ ಬೆರಳು ಮುರಿದಿದ್ದು, ಸಿಬ್ಬಂದಿ ಆದರ್ಶ ಅವರಿಗೂ ಗಾಯವಾಗಿದೆ ಎಂದು ಜಿಲ್ಲಾ ರಕ್ಷಣಧಿಕಾರಿ ಬಿ.ನಿಖಿಲ್ ವಿಡಿಯೋ ಮೂಲಕ ತಿಳಿಸಿದ್ದಾರೆ.
ಆತ್ಮರಕ್ಷಣೆಗಾಗಿ ಗುಂಡಿನ ದಾಳಿ
ಪಿಎಸ್‌ಐ ಕೃಷ್ಣಕುಮಾರ್ ಅವರ ಮೇಲೆ ರೌಡಿ ಡಿಚ್ಚಿ ಮುಬಾರಕ್ ಪುನಃ ದಾಳಿಗೆ ಮುಂದಾಗಿದ್ದ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದರು. ಆದರೂ ಲಕ್ಷಿಸದ ಮುಬಾರಕ್, ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಚಾಕುವಿನಿಂದ ಇರಿಯಲು ಮುಂದಾದಾಗ, ಅಧಿಕಾರಿಗಳು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗಾಯಗೊಂಡ ಡಿಚ್ಚಿ ಮುಬಾರಕ್ ಹಾಗೂ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಮುಬಾರಕ್‌ನ ಸಹಚರರಾದ ಜಹೀರ್, ರೆಹಮತ್ ಪಾಷಾ, ಜುನೈದ್ ಮತ್ತು ಮನುಸಿಂಗ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್‌ಪಿ ಪ್ರಕಾಶ್ ರಾಠೋಡ್ ನೇತೃತ್ವದಲ್ಲಿ ಪಿಎಸ್‌ಐ ಸಿದ್ದಪ್ಪ ಎಂ.ಪಿ., ಪಿಎಸ್‌ಐ ಕೃಷ್ಣಕುಮಾರ್ ಬಿ. ಮಾನೆ, ಪಿಎಸ್‌ಐ ರಮೇಶ್, ವೆಂಕಟೇಶ, ಆದರ್ಶ ಜೆ., ಮಂಜುನಾಥ್, ಚೆನ್ನನಾಯ್ಕ, ಸುನಿಲ್, ಕಾಂತರಾಜ್, ನಾಗರಾಜ್, ತೇಜಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?


LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















