ಚಲಿಸುತ್ತಿದ್ದಾಗ ಚಕ್ರ ಕಟ್‌ ಆಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್‌

ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಶೀರಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ಸೊಂದರ (private bus) ಹಿಂಬದಿ ವೀಲ್ ಕಟ್ ಆಗಿ ಅಡಕೆ ತೋಟಕ್ಕೆ ನುಗ್ಗಿದೆ. ಬಸ್ಸಿನಲ್ಲಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ 25ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕೇರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಶೀರಿಹಳ್ಳಿ ಗ್ರಾಮದ ಸಮೀಪ ಚಲಿಸುತ್ತಿದ್ದಾಗ ಹಠಾತ್ತನೆ ಹಿಂಬದಿ ಚಕ್ರದ ಆಕ್ಸಲ್‌ ಸಂಪೂರ್ಣ ಕಟ್‌ ಆಗಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಪಕ್ಕದಲ್ಲಿದ್ದ ಅಡಕೆ ತೋಟಕ್ಕೆ ನುಗ್ಗಿದೆ. ವೇಗವಾಗಿ ನುಗ್ಗಿದ ಬಸ್ ತೋಟದಲ್ಲಿದ್ದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.

Krishna-Bus-lost-backside-tires-at-Shirihalli-in-Shiralakoppa

ಬಸ್ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಕಾರಣ ತೋಟದ ಹಳ್ಳಕ್ಕೆ ಬೀಳುವುದು ತಪ್ಪಿದೆ. ಇದರಿಂದಾಗಿ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಶಿರಾಳಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ – ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್‌, 19 ಅಕೌಂಟ್, 25 ATM ಕಾರ್ಡ್‌, ₹55 ಕೋಟಿ ನಷ್ಟ, ಏನಿದು ಕೇಸ್?

Shivamogga Live reached 2.8 million views in January-2026 - Editor : Nitin Kaidotlu
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 10, 2026 at 10:35 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 10, 2026

Leave a Comment