ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದರು.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಪ್ರಸ್ತಾವನೆ ಮುಂದಿಟ್ಟಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸಂಸದ ರಾಘವೇಂದ್ರ ಮನವಿ ಮಾಡಿದರು.
ಕುವೆಂಪು ಅವರ ಜನ್ಮಭೂಮಿಯಾದ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡುವುದು ಕನ್ನಡದ ಸಾಂಸ್ಕೃತಿಕ ಪರಂಪರೆ ಮತ್ತು ಅವರ ಸಾಹಿತ್ಯ ಸಾಧನೆಗೆ ಸಲ್ಲಿಸುವ ದೊಡ್ಡ ಗೌರವವಾಗಿದೆ.ಬಿ.ವೈ.ರಾಘವೇಂದ್ರ, ಸಂಸದ
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ