ಶಿವಮೊಗ್ಗ ಲೈವ್.ಕಾಂ | HOSANAGARA | 4 ಅಕ್ಟೋಬರ್ 2019
ಸಿನಿಮೀಯ ರೀತಿಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಿದ ಯುವಕ, ಆಕೆಯನ್ನು ನಡುದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಲಾಂಗ್ ತೋರಿಸಿ, ಯುವತಿಯನ್ನು ಬೆದರಿಸಿ ಅಪಹರಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿಯ ಕುರುವಳ್ಳಿ ನಾಗರಾಜ್ ಮತ್ತು ಆತನ ಮೂವರು ಸ್ನೇಹಿತರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಹೊಸನಗರ ಯಡೂರಿನಲ್ಲಿ ಯುವತಿ ಮನೆ ಬಳಿ ದೇವಸ್ಥಾನಕ್ಕೆ ತೆರಳಿದ್ದಾಗ ಅಪಹರಣ ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಯುವತಿಯ ಮನೆಯವರು ಅಪಹರಣಕಾರರ ಕಾರನ್ನು ಹಿಂಬಾಲಿಸಿದ್ದಾರೆ.
ಭಯಗೊಂಡ ಅಪಹೃತರು ಯಡೂರು ಸಮೀಪದ ಕಾಸರವಳ್ಳಿ ಗ್ರಾಮದಲ್ಲಿ ಬಳಿ ಕಾರು ಮತ್ತು ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಅಪಹರಣಕ್ಕೆ ಪಕ್ಕಾ ಮಾಸ್ಟರ್ ಪ್ಲಾನ್
ಯುವತಿ ಅಪಹರಣಕ್ಕೆ ನಾಗರಾಜ್ ಮತ್ತು ಗ್ಯಾಂಗ್ ಪಕ್ಕಾ ಪ್ಲಾನ್ ಮಾಡಿಕೊಂಡಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಡ್ನಾಪ್’ಗೆ ನಾಗರಾಜ್’ನ ಸ್ನೇಹಿತನ ಕಾರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಕೃತ್ಯಕ್ಕು ಮೊದಲು ಕಾರಿನ ನಂಬರ್ ಪ್ಲೇಟ್ ತೆಗೆಯಲಾಗಿದೆ ಎಂದು ಹೇಳಲಾಗುತ್ತಿದೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಹರಣಕಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಡಿವೈಎಸ್’ಪಿ ರವಿಕುಮಾರ್, ಸಿಪಿಐ ಗುರಣ್ಣ ಹೆಬ್ಬಾಳ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]