ಭದ್ರಾವತಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ತಗ್ಗಿಸಲು ಸಾಧ್ಯ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ಹೇಳಿದರು. (public meeting)
ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಆಯೋಜಿಸಿದ್ದ ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಕೆಳ- ಮಧ್ಯಮ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಯಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ ಎಂದರು.

ಪಂಚ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್, ಬಗರ್‌ಹುಕುಂ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಮಣಿಶೇಖರ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಹೆಚ್.ಎಲ್ ಷಡಾಕ್ಷರಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್, ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ತಳ್ಳಿಕಟ್ಟೆ ಲೋಕೇಶ್ ಉಪಸ್ಥಿತರಿದ್ದರು.
ಇದನ್ನೂ ಓದಿ – ಅರ್ಧಕ್ಕರ್ಧ ಭದ್ರಾವತಿ ತಾಲೂಕಿನಲ್ಲಿ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್







