ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

Published On : ಫೆಬ್ರವರಿ 12, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ಹೊಸಸಿದ್ದಾಪುರದ ಎನ್‌ಟಿಬಿ ಲೇಔಟ್‌ನಲ್ಲಿರುವ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು, ಬೆಳ್ಳಿ ವಸ್ತುಗಳು (gold and silver) ಹಾಗೂ ನಗದು ದೋಚಲಾಗಿದೆ.

ಹೊಸಸಿದ್ದಾಪುರದ ಸರೋಜ ಎಂಬುವವರು ಕುಟುಂಬದೊಂದಿಗೆ ತಾಯಿಯ ಮನೆಗೆ ತೆರಳಿದ್ದರು. ಇದೇ ಹೊತ್ತಿನಲ್ಲಿ ಕಳ್ಳರು ಮನೆಯ ಮುಂಬಾಗಿಲು ಮತ್ತು ಬೆಡ್‌ರೂಮ್‌ನಲ್ಲಿದ್ದ ಅಲ್ಮೇರಾವನ್ನು ಆಯುಧದಿಂದ ಮೀಟಿ ಕಳ್ಳತನ ಮಾಡಿದ್ದಾರೆ. ರಾತ್ರಿ ಸರೋಜ ಅವರ ಮಗ ಪ್ರೇಮ್ ಕುಮಾರ್ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮನೆಯಲ್ಲಿ ₹6.60 ಲಕ್ಷ ಮೌಲ್ಯದ ಒಟ್ಟು 132 ಗ್ರಾಂ ತೂಕದ ಚಿನ್ನಾಭರಣ, ₹50,000 ಮೌಲ್ಯದ ಅರ್ಧ ಕೆಜಿ ಬೆಳ್ಳಿ ವಸ್ತು ಹಾಗೂ ₹34,000 ನಗದು ಸೇರಿ ಒಟ್ಟು ₹7.44 ಲಕ್ಷ ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್‌ಫರ್‌ ಆಗಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 12, 2026

Leave a Comment