ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಮಲ್ಲಿಕಾರ್ಜುನ ಟಾಕೀಸ್ ಪಕ್ಕದಲ್ಲಿರುವ ಫುಡ್ ಕೋರ್ಟ್ನಲ್ಲಿ (food court) ಬೈಕ್ ಸೈಡ್ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಾಮಾಕ್ಷಿ ಬೀದಿ ನಿವಾಸಿ ರಾಮು ಎನ್. (56) ಎಂಬುವವರು ಗಾಯಗೊಂಡಿದ್ದಾರೆ. ರಾಮು ಅವರು ವೆಜ್ ಫುಡ್ ಕೋರ್ಟ್ನಲ್ಲಿ ಉಪಹಾರ ಮುಗಿಸಿ ಹೊರಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಫುಡ್ ಕೋರ್ಟ್ನಿಂದ ಹೊರಬರುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಬೈಕ್ ತೆಗೆಯಲು ಜಾಗ ಬಿಡುವಂತೆ ರಾಮು ಅವರಿಗೆ ಹೇಳಿ ತಳ್ಳಿದ್ದಾರೆ. ಅಲ್ಲದೆ, ರಾಮು ಅವರ ಕಾಲಿನ ಮೇಲೆ ಬೈಕ್ ಹತ್ತಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ರಾಮು ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆಸಿದವರು ರಾಮು ಅವರ ಮೊಬೈಲ್ ನೆಲಕ್ಕೆ ಎಸೆದು ಪುಡಿಪುಡಿ ಮಾಡಿದ್ದಲ್ಲದೆ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಣೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದರಿಂದ ರಾಮು ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಹೊಸ ಸೇತುವೆ ಮರು ನಿರ್ಮಾಣ, ಸ್ಥಳಕ್ಕೆ ಎಂಎಲ್ಎ ಭೇಟಿ

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















