ಆನಂದಪುರದ ಮನೆಯಲ್ಲಿ ಯುವಕ ನೇಣಿಗೆ ಶರಣು

Published On : ಫೆಬ್ರವರಿ 19, 2026

Published By : ನಿತಿನ್‌ ಆರ್‌.ಕೈದೊಟ್ಲು 

ಸಾಗರ: ಆನಂದಪುರ ಗ್ರಾಮದ ಅಶೋಕ ರಸ್ತೆಯಲ್ಲಿ ಯುವಕನೊಬ್ಬ (areca trader) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Shivamogga-Live-Number-1-Website

ಅಶೋಕ ರಸ್ತೆಯ ನಿವಾಸಿ ನವೀನ್ (27) ನೇಣಿಗೆ ಶರಣಾದ ಯುವಕ. ನವೀನ್ ಕಳೆದ ಕೆಲವು ವರ್ಷಗಳಿಂದ ಸಣ್ಣದಾಗಿ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದರು. ಇವತ್ತು ಮನೆಯ ಹಿಂಭಾಗದಲ್ಲಿ ಜಾತ್ರೆಗೆ ಸಂಬಂಧಿಸಿದಂತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಮನೆಯವರು, ಕೊಠಡಿಯ ಒಳಗೆ ನೋಡಿದಾಗ ನವೀನ್ ಹಗ್ಗದಿಂದ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

Anandapura-youth-Succumbed-at-his-house

ತಕ್ಷಣ ನವೀನ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ದೇವಸ್ಥಾನಕ್ಕೆ ಪೂಜೆಗೆ ಬಂದ ಅರ್ಚಕರಿಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 19, 2026

Leave a Comment