ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿಯ (Chandragutti) ರೇಣುಕಾಂಬಾ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆಯಿತು.
ತಹಶೀಲ್ದಾರ್ ಪುರಂದರ ಕೆ. ಸಮ್ಮುಖದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಹುಣ್ಣಿಮೆ ಹಾಗೂ ವಿಶೇಷ ದಿನಗಳಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ನಾಣ್ಯಗಳು ಮತ್ತು ನೋಟುಗಳನ್ನು ಎಣಿಕೆ ಮಾಡಲಾಯಿತು. ದೇವಸ್ಥಾನದ ಹುಂಡಿಯಲ್ಲಿ ಒಟ್ಟು ₹ 35,63,130 ಕಾಣಿಕೆ ಸಂಗ್ರಹವಾಗಿದೆ.

ಹುಂಡಿ ಎಣಿಕೆ ಕಾರ್ಯ ನಡೆಯುವ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ, ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಲಲಿತಾ, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ತಡರಾತ್ರಿ 2 ಗಂಟೆಗೆ ಕೇಳಿತು ಸ್ಪೋಟದ ಶಬ್ದ, ಮನೆಯಿಂದ ಹೊರ ಬಂದಾಗ ಕಾಣಿಸ್ತು ಬೆಚ್ಚಿಬೀಳುವ ದೃಶ್ಯ

ಇದನ್ನೂ ಓದಿ:➤ ಮೆಸ್ಕಾಂ ಸಹಾಯಕ ಇಂಜಿನಿಯರ್ ಅಮಾನತು, ಕಾರಣವೇನು?
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
