ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಫೆ. 21ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ (job) ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9901914601ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಉಂಬ್ಳೆಬೈಲು ಬಳಿ ಬೊಲೇರೋ ಪಿಕಪ್ ವಾಹನ ಮುಂಭಾಗ ಜಖಂ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?
LATEST NEWS
- ಮನೆ, ಅಡಿಕೆ ಮರಳಗಳ ಸುತ್ತಲು ಟ್ರಂಚ್ ನಿರ್ಮಿಸುತ್ತಿದ್ದ ಅರಣ್ಯ ಇಲಾಖೆಗೆ MLA ವಾರ್ನಿಂಗ್

- ಮೈಸೂರು – ತಾಳಗುಪ್ಪ ರೈಲುಗಳ ಕುರಿತು ಮಹತ್ವದ ಅಪ್ಡೇಟ್

- ಚಂದ್ರಗುತ್ತಿ ಜಾತ್ರೆ, ಮಹತ್ವದ ಆದೇಶ ಹೊರಡಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ, ಏನದು?

- ಉಚಿತ ಆಯುರ್ವೇದ ಚಿಕಿತ್ಸೆ ನೆಪ, ಶಿವಮೊಗ್ಗದ ಮತ್ತೂರಿನಲ್ಲಿ ಮಹಾ ವಂಚನೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಫೆಬ್ರವರಿ 21ರಂದು ಉದ್ಯೋಗ ಮೇಳ, ಪ್ರತಿಷ್ಠಿತ ಕಂಪನಿಗಳು ಭಾಗಿ, ಎಲ್ಲಿ?

About The Editor
ನಿತಿನ್ ಆರ್.ಕೈದೊಟ್ಲು






