ಅಂಗನವಾಡಿ ಸಹಾಯಕಿ ಅನುಮಾನಾಸ್ಪದ ಸಾವು ಕೇಸ್‌, ಆರೋಪಿ ಅರೆಸ್ಟ್‌

ಶಿಕಾರಿಪುರ: ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಪ್ರೇಮಾ (52) ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ (arrested). (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೋಡಿಹಳ್ಳಿ ಗ್ರಾಮದ ರಾಘವೇಂದ್ರ (26) ಎಂದು ಗುರುತಿಸಲಾಗಿದೆ. ಫೆಬ್ರವರಿ 14 ರಂದು ಬಿಳಕಿ ಗ್ರಾಮದ ಮನೆಯಲ್ಲಿ ಪ್ರೇಮಾ ಅವರ ಮೃತದೇಹ ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಮೃತ ಮಹಿಳೆಯ ಪುತ್ರ, ತನ್ನ ತಾಯಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Raghavendra-Arrest-in-an-anganavadi-worker-death-case

Raghavendra-Arrest-in-an-anganavadi-worker-death-case

ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಮನೆ, ಅಡಿಕೆ ಮರಳಗಳ ಸುತ್ತಲು ಟ್ರಂಚ್‌ ನಿರ್ಮಿಸುತ್ತಿದ್ದ ಅರಣ್ಯ ಇಲಾಖೆಗೆ MLA ವಾರ್ನಿಂಗ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment