ಶಿಕಾರಿಪುರ: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿಯ ಮೆರವಣಿಗೆಯ ಸಂದರ್ಭ ನಡೆದ ಕಲ್ಲು ತೂರಾಟದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದಾರೆ. ಈ ಕೃತ್ಯ ಎಸಗಿದ ದೇಶದ್ರೋಹಿಗಳನ್ನು (Anti Nationals) ತಕ್ಷಣವೇ ಬಂಧಿಸಿ, ಜೈಲಿಗಟ್ಟಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶಿಕಾರಿಪುರದಲ್ಲಿ ವಿಡಿಯೋ ಹೇಳಿಕೆ ನೀಡಿದ ಬಿ.ವೈ.ವಿಜಯೇಂದ್ರ, ಕೆಲವು ದೇಶದ್ರೋಹಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈಗಾಗಲೇ ಪೊಲೀಸರಿಗೆ ಅವರನ್ನು ಬಂಧಿಸಿದ್ದಾರೆ. ಇಂತಹ ಕೃತ್ಯಗಳು ಟಿಪ್ಪು ಮತ್ತು ಔರಂಗಜೇಬನ ಮನಸ್ಥಿತಿಯನ್ನು ಬಿಂಬಿಸುತ್ತವೆ. ಇಂತಹ ದೇಶದ್ರೋಹಿಗಳನ್ನು ಕ್ಷಮಿಸಬಾರದು ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
ಇದನ್ನೂ ಓದಿ – ಶಿಕಾರಿಪುರದಲ್ಲಿ ವಕೀಲ ನೇಣಿಗೆ ಶರಣು, ಕಾರಣವೇನು?







