ಶಿವಮೊಗ್ಗ: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಲಾ ಪ್ರತಿಭೋತ್ಸವ-2025ರ ವಿವಿಧ ಸ್ಪರ್ಧೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಐವರು ಪ್ರತಿಭೆಗಳು ಬಹುಮಾನ (winners) ಪಡೆದುಕೊಂಡಿದ್ದಾರೆ.
ಯುವ ಪ್ರತಿಭೆ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವಿಸ್ಮಿತಾ ವಿ. ಅವರು ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸುಗಮ ಸಂಗೀತ ಸ್ಪರ್ಧೆಯಲ್ಲಿ ಸೊರಬದ ಭುವನ್ ಅವರು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇದನ್ನೂ ಓದಿ – ಗಾಂಧಿ ಬಜಾರ್ ಮುಂದೆ ಮಹಾಕಾಳಿಯ ಅಬ್ಬರ, ಬೃಹತ್ ಕಲಾಕೃತಿಯ ವಿಶೇಷತೆ ಏನು?
ಬಾಲಪ್ರತಿಭೆ ವಿಭಾಗದಲ್ಲಿ ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆಯ ಸುಮೇರು ವಿ. ಸಕಲೇಶಪುರ ಅವರು ದ್ವಿತೀಯ ಸ್ಥಾನ ಪಡೆದರೆ, ಚಿತ್ರಕಲೆ ಸ್ಪರ್ಧೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ. ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಕಿಶೋರ ಪ್ರತಿಭೆ ವಿಭಾಗದ ಸುಗಮ ಸಂಗೀತ ಸ್ಪರ್ಧೆಯಲ್ಲಿ ಪಿ.ಇ.ಎಸ್ ಶಾಲೆಯ ನವನೀತರಾಜ್ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.







