ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ, ತಂಪಾದ ಇಳೆ, ಎಲ್ಲೆಲ್ಲಿ ಮಳೆಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಮಲೆನಾಡಿನ ಹಲವೆಡೆ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ವರ್ಷದ ಮೊದಲ ಮಳೆ (first rain) ಸಿಂಚನದಿಂದಾಗಿ ತಾಪಮಾನ ತುಸು ತಗ್ಗಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ.

Shimoga-Rainfall-city

ಮಂಗಳವಾರ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ತಾಲೂಕಿನ ಕೆಲವೆಡೆ ಮಳೆ ಬಿದ್ದಿತ್ತು. ಕೆಲವೆಡೆ ವಿದ್ಯುತ್ ವ್ಯತ್ಯಯವಾಗಿತ್ತು. ದಿಢೀರ್ ಮಳೆ ಬಂದಿದ್ದರಿಂದ ಜನರು ಅಂಗಡಿ ಮುಂಗಟ್ಟುಗಳ ಆಶ್ರಯ ಪಡೆಯಬೇಕಾಯಿತು. ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು. ಮಳೆಯಿಂದ ಇಳೆ ತಂಪಾಯಿತು. ಕಳೆದ ಕೆಲವು ದಿನಗಳಿಂದ ಬೇಸಿಗೆಯ ಬಿಸಿಲಿನ ಧಗೆ ಹೆಚ್ಚಾಗಿದ್ದು ಮಳೆಯಿಂದ ವಾತಾವರಣ ತುಸು ತಂಪಾಗಿದೆ.

ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಬುಧವಾರ ಮಳೆಯಾಗಿದೆ. ಸಾಗರ, ಆನಂದಪುರ, ಹೊಸನಗರ, ಶಿಕಾರಿಪುರದ ಹಲವೆಡೆ ಮಳೆ ಬಿದ್ದಿದೆ. ಸಾಗರ ನಗರದಲ್ಲಿ ಭಾರಿ ಗಾಳಿ ಸಹಿ ಮಳೆಯಾಗಿದೆ. ಇದರಿಂದ ಕೆಲವೆಡೆ ಚರಂಡಿ ಭರ್ತಿಯಾಗಿ ರಸ್ತೆ ಮೇಲೆ ಹರಿದಿದೆ. ಶಿವಮೊಗ್ಗ ನಗರದಲ್ಲಿ ಬೆಳೆಗ್ಗೆಯಿಂದ ಬಿಸಿಲಿನ ಧಗೆ ಹೆಚ್ಚಾಗಿದ್ದು, ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣವಿತ್ತು. ಕೆಲವು ಬಡಾವಣೆಗಳಲ್ಲಿ ಮಳೆಯಾಗಿದೆ.

ಇದನ್ನೂ ಓದಿ – ಸಂತೆಕಡೂರು ಬಳಿ ಅಪಘಾತ, ಓರ್ವ ಸಾವು, ಮತ್ತೊಬ್ಬನ ಕಾಲು ಕಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment