ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 1ರಂದು ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣದ (Shivamogga Airport) ಮೂಲಕ ಜಿಲ್ಲೆಗೆ ಆಗಮಿಸಿ, ನಂತರ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಆಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಗ್ಗೆ ಬೆಳಗ್ಗೆ 11ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ (VT-SNP) ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಬೆಳಗ್ಗೆ 11.50ಕ್ಕೆ ಶಿವಮೊಗ್ಗದ ಸೋಗಾನೆ ಬಳಿಯ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗದ ಮೂಲಕ ತರೀಕೆರೆಗೆ ಪ್ರಯಾಣ ಮಾಡಲಿದ್ದಾರೆ.

ಮಧ್ಯಾಹ್ನ 12.20ಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಗೆ ತಲುಪಲಿದ್ದಾರೆ. ಮಧ್ಯಾಹ್ನ 12.30 ರಿಂದ 2.30ರವರೆಗೆ ತರೀಕೆರೆಯ ಬಿ.ಹೆಚ್. ರಸ್ತೆಯಲ್ಲಿರುವ ರಿಲಯನ್ಸ್ ಪೆಟ್ರೋಲ್ ಪಂಪ್ ಹಿಂಭಾಗ ಆಯೋಜಿಸಲಾಗಿರುವ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 02.30ಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಮುಖ ಚರ್ಚೆ ಮತ್ತು ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ – ₹82,00,15,712 ವಂಚನೆ, ದೇಶಾದ್ಯಂತ 352 ಕೇಸ್, ಶಿವಮೊಗ್ಗದಲ್ಲಿ 3 ಅರೆಸ್ಟ್, ಕೋಟಿ ಕೋಟಿ ಮೋಸ ಹೇಗಾಯ್ತು?
ಮಧ್ಯಾಹ್ನ 2.50ಕ್ಕೆ ತರೀಕೆರೆಯಿಂದ ರಸ್ತೆ ಮಾರ್ಗದ ಮೂಲಕ ಮರಳಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಲಿದ್ದಾರೆ. ಮಧ್ಯಾಹ್ನ 3.50ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ತಿಳಿಸಲಾಗಿದೆ.


About The Editor
ನಿತಿನ್ ಆರ್.ಕೈದೊಟ್ಲು






