ಬಂಜಾರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಶೋಕ್‌ ನಾಯ್ಕ್‌ ದಿಢೀರ್‌ ರಾಜೀನಾಮೆ, ಕಾರಣವೇನು?

ಶಿವಮೊಗ್ಗ: ಜಿಲ್ಲಾ ಬಂಜಾರ (Banjara) ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್‌ ನಾಯ್ಕ್, ಸಂಘದ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆಗೆ ಕಾರಣವೇನು?

ವೈಯಕ್ತಿಕ ಮತ್ತು ಕುಟುಂಬದ ಜವಾಬ್ದಾರಿ: ಪ್ರಸಕ್ತ ಸನ್ನಿವೇಶದಲ್ಲಿ ಕುಟುಂಬ ಹಾಗೂ ವೈಯಕ್ತಿಕ ಕೆಲಸಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Former-MLA-K-B-Ashok-Naik

ಹೊಸ ಪೀಳಿಗೆಗೆ ಅವಕಾಶ: ಸಮಾಜದ ಎರಡನೇ ತಲೆಮಾರಿನ ಯುವಕರು ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಲು ಅನುವು ಮಾಡಿಕೊಡುವ ಉದ್ದೇಶದಿಂದ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ಇನ್ನು ಏನೇನಿದೆ?

ನಾಲ್ಕು ವರ್ಷದಿಂದ ಸಂಘದ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ಹಲವು ಸಮಾಜಮುಖಿ ಕಾರ್ಯ ಮಾಡಲಾಗಿದೆ. ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ರೈಲಿನಲ್ಲಿ ಚಾಕು ತೋರಿಸಿ ಮೊಬೈಲ್‌ ದರೋಡೆ ಕೇಸ್‌, ಇಬ್ಬರು ಆರೆಸ್ಟ್‌, ಏನಿದು ಪ್ರಕರಣ?

number-1-advt-copy-new.webp
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 28, 2026 at 9:40 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 28, 2026

Leave a Comment