ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಮನೆಯೊಂದರ ಬೀಗ ಮುರಿದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಹೊಸನಗರ ತಾಲೂಕು ನಗರ ಠಾಣೆ ಪೊಲೀಸರು (Hosanagara police) ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹7,90,000 ಮೌಲ್ಯದ ಚಿನ್ನದ ಸರ, ಬ್ರೇಸ್‌ಲೆಟ್, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
2025ರ ಡಿಸೆಂಬರ್ 27 ರಂದು ಹೊಸನಗರ ತಾಲೂಕಿನ ನಿಟ್ಟೂರು ನಾಗೋಡಿ ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರ ಮನೆಯ ಮುಂಬಾಗಿಲ ಬೀಗವನ್ನು ಮುರಿದು ಕಳ್ಳರು ಒಳ ನುಗ್ಗಿದ್ದರು. ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭಟ್ಕಳದ ಮಹಿಳೆ ಸೇರಿ ನಾಲ್ವರು ಅರೆಸ್ಟ್
ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಐಪಿಎಸ್ ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಾಂತ್ರಿಕ ಸಹಕಾರ ಮತ್ತು ಬೆರಳಚ್ಚು ವಿಭಾಗದ ನೆರವಿನೊಂದಿಗೆ ಭಟ್ಕಳ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಮ್ರಾನ್ ಇಕ್ಕೇರಿ (25), ಮಹಮ್ಮದ್ ಅಖೀಲ್ (24), ಅಮೀರ್ ಹಸನ್ ಬ್ಯಾರಿ (29), ಬೇಬಿ ಹಾಜಿರ (55) ಬಂಧಿತರು.

ಆರೋಪಿಗಳಿಂದ ₹3,87,000 ಮೌಲ್ಯದ 30 ಗ್ರಾಂ ತೂಕದ ಬಂಗಾರದ ನೆಕ್ಲೇಸ್, ₹93,000 ಮೌಲ್ಯದ 6 ಗ್ರಾಂ ತೂಕದ ಬಂಗಾರದ ಬ್ರಾಸ್‌ಲೆಟ್, 50 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ಮೊಬೈಲ್ ಫೋನ್, ಕೃತ್ಯಕ್ಕೆ ಬಳಸಿದ ಇಟಿಯೋಸ್ ಕಾರು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?
ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ ಎನ್. ಕಲಗುಜ್ಜಿ, ಹೊಸನಗರ ಇನ್ಸ್‌ಪೆಕ್ಟರ್ ಎಂ.ಐ. ಗೌಡಪ್ಪಗೌಡ ಮೇಲ್ವಿಚಾರಣೆಯಲ್ಲಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ಶಿವಾನಂದ ಕೋಳಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ತಂಡದಲ್ಲಿ ಎ.ಎಸ್.ಐ.ಗಳಾದ ಕುಮಾರ್ ಟಿ, ಶೇಖ್ ಅಮೀರ್ ಜಾನ್, ಮುಖ್ಯ ಪೇದೆಗಳಾದ ಕಿರಣ್ ಕುಮಾರ್ ಡಿ.ವೈ, ಗಿರಿಪ್ರಸಾದ್ ಡಿಸಿ, ವಿಶ್ವನಾಥ್ ಡಿ, ಪ್ರವೀಣ್ ಕುಮಾರ್ ಬಿ.ಎಸ್, ಶಿವಕುಮಾರ ನಾಯ್ಕ, ಸಿಬ್ಬಂದಿ ರವಿಚಂದ್ರ, ಸಚಿನ್, ಮಂಜುನಾಥ, ಲಕ್ಷ್ಮಣ ಜಿ.ಹೆಚ್, ಅಕ್ಷಯ ಕೆ.ಆರ್, ಮಹಿಳಾ ಪೊಲೀಸ್ ಸಿಬ್ಬಂದಿ ಶಿಲ್ಪಾ ಎನ್, ಅನುಷಾ ಎಸ್, ಚಾಲಕರಾದ ಮಧುಸೂಧನ ಹಾಗೂ ಶಶಿಧರ.ಎನ್ ಪಾಲ್ಗೊಂಡಿದ್ದರು. ಜಿಲ್ಲಾ ಎ.ಎನ್.ಸಿ ಸಿಬ್ಬಂದಿಯವರಾದ ಗುರುರಾಜ್, ಇಂದ್ರೇಶ್ ಮತ್ತು ಜಿಲ್ಲಾ ಬೆರಳಚ್ಚು ವಿಭಾಗದ ಸಿಬ್ಬಂದಿ ತಾಂತ್ರಿಕ ಸಹಕಾರ ನೀಡಿದ್ದಾರೆ.

LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





