
ಶಿವಮೊಗ್ಗ: ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾರಕಾಸ್ತ್ರಗಳು (weapons) ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಪಿಎಸ್‌ಐ ತಿರುಮಲೇಶ್ ಅವರು ಸಿಬ್ಬಂದಿ ಜೊತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಕೊಳದ ವಿಕಾಸ ಸ್ಕೂಲ್ ರಸ್ತೆಯಲ್ಲಿ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳನ್ನು ತಡೆದು ತಪಾಸಣೆ ನಡೆಸಿದಾಗ, ಎರಡು ಕಬ್ಬಿಣದ ಮಚ್ಚುಗಳು ಪತ್ತೆಯಾಗಿವೆ. ಆಯುಧಗಳನ್ನು ಹೊಂದಿರುವ ಬಗ್ಗೆ ಆರೋಪಿಗಳು ಸಮಂಜಸ ಉತ್ತರ ನೀಡದ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಏರ್‌ಟೆಲ್ ಮೊಬೈಲ್ ಟವರ್‌ನ ಉಪಕರಣ ಕಳವು, ಆಗಿದ್ದೇನು?
ಪ್ರವೀಣ್ ಅಲಿಯಾಸ್ ತಲೈವಾ (27) ಮತ್ತು ಭುವನೇಶ್ವರ (26) ಬಂಧಿತರು. ಎರಡು ಮಚ್ಚುಗಳನ್ನು ಹಾಗೂ ಬೈಕನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








