ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

number-1-advt-copy-new.webp

ಶಿವಮೊಗ್ಗ: ನಗರದ ಆಲ್ಕೋಳ ಸರ್ಕಲ್ ಬಳಿ ಚಲಿಸುತ್ತಿದ್ದ ಕಾರೊಂದರಲ್ಲಿ ಹಠಾತ್ ಬೆಂಕಿ (car fire) ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಕಾರಿನ ಮುಂಭಾಗ ಸುಟ್ಟು ಹೋಗಿದೆ.

ಇಂದು ಸಂಜೆ ಗಾಡಿಕೊಪ್ಪ ಕಡೆಯಿಂದ ಶಿವಮೊಗ್ಗ ನಗರದತ್ತ ಬರುತ್ತಿದ್ದ ಡಸ್ಟರ್ ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಕಾರು ಆಲ್ಕೋಳ ಸರ್ಕಲ್ ಸಮೀಪಿಸುತ್ತಿದ್ದಂತೆ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಮತ್ತು ಪ್ರಯಾಣಿಕರು ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಬೆಂಕಿಗಾಹುತಿಯಾದ ಕಾರು ಟ್ಯಾಂಕ್ ಮೊಹಲ್ಲಾ ನಿವಾಸಿ ಮುಜಾಮಿಲ್ ಅವರಿಗೆ ಸೇರಿದ್ದಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದಾರೆ.

Duster-Car-incident-near-Alkola-in-Shimoga-city.

ಇದನ್ನೂ ಓದಿ – ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್‌ ಸಹಿತ ಇಬ್ಬರು ಅರೆಸ್ಟ್‌, ಕಾರಣವೇನು?

ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 6, 2026 at 9:37 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 6, 2026

Leave a Comment