ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ತರೀಕೆರೆ ರಸ್ತೆ ಬಳಿ ಗುಜರಿಗೆ (scrap yard) ಹಾಕಿದ್ದ ಹಳೆಯ ವಾಹನಗಳನ್ನು ನಿಲ್ಲಿಸುವ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿ ಹಲವು ವಾಹನಗಳು ಸುಟ್ಟು ಕರಕಲಾಗಿವೆ. ಮುಖಂ ಖಾನ್ ಎಂಬುವವರು ಇಲ್ಲಿ ಶೆಡ್ ಹಾಕಿಕೊಂಡು ಗುಜರಿ ವ್ಯಾಪಾರ ನಡೆಸುತ್ತಿದ್ದಾರೆ. ಇದರ ಪಕ್ಕದಲ್ಲಿನ ಖಾಲಿ ಜಾಗದಲ್ಲಿ ಇವರು ಹಲವು ಹಳೆಯ ವಾಹನಗಳನ್ನು ನಿಲ್ಲಿಸುತ್ತಿದ್ದರು.

ಘಟನೆಯಲ್ಲಿ ಗುಜರಿಗೆ ಹಾಕಲಾಗಿದ್ದ 2 ಕಾರ್, 1 ಆಟೊ ರಿಕ್ಷಾ ಹಾಗೂ 20 ಬೈಕ್ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಘಟನೆಯಲ್ಲಿ ಸುಟ್ಟಿರುವ ಗುಜರಿ ವಾಹನಗಳ ಮೌಲ್ಯ ₹8 ಲಕ್ಷ ಎಂದು ಅಂದಾಜಿಸಲಾಗಿದೆ.
ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





