ಭದ್ರಾವತಿಯ ಒಂದೇ ಕುಟುಂಬದ ಐದು ಜನರಿಗೆ 2 ವರ್ಷ ಜೈಲು ಶಿಕ್ಷೆ, ₹1,90,000 ದಂಡ, ಏನಿದು ಪ್ರಕರಣ?

ಭದ್ರಾವತಿ: ಜಾಗದ ವಿಚಾರವಾಗಿ ಜಗಳ ತೆಗೆದು ವ್ಯಕ್ತಿಯೊಬ್ಬರಿಗೆ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಿದ್ದ ಒಂದೇ ಕುಟುಂಬದ (family) ಐವರು ಆರೋಪಿಗಳಿಗೆ ಭದ್ರಾವತಿಯ ನ್ಯಾಯಾಲಯವು ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

2020ರ ಜೂನ್ 3ರಂದು ಭದ್ರಾವತಿ ತಾಲೂಕಿನ ಸುಣ್ಣದಹಳ್ಳಿ ಗ್ರಾಮದ ಆರ್ಮುಗಂ (55) ಎಂಬುವವರು ತಮ್ಮ ಜಾಗದಲ್ಲಿ ಸರ್ವೇ ಮಾಡಿಸುತ್ತಿದ್ದರು. ಈ ವೇಳೆ ಅದೇ ಗ್ರಾಮದ ಜಗದೀಶ್, ಕಾಂತರಾಜ್, ನಾಗೇಶ್, ಮಂಜುನಾಥ್ ಮತ್ತು ಪ್ರೇಮಾ ಎಂಬುವವರು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿದ್ದರು. ಅಲ್ಲದೆ, ಆರ್ಮುಗಂ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿಯ ಹೆಸರಿನಲ್ಲಿ ಅವಮಾನಿಸಿದ್ದರು. ಈ ವೇಳೆ ಇಟ್ಟಿಗೆ ಹಾಗೂ ರೀಪೀಸ್‌ನಿಂದ ಹಲ್ಲೆ ನಡೆಸಿ ರಕ್ತಗಾಯ ಉಂಟುಮಾಡಿದ್ದರು.

Bhadravathi News Graphics
knief assault

ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್‌ಪಿ ಸುಧಾಕರ್ ಎಸ್. ನಾಯ್ಕ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಆರೋಪಿಗಳ ಮೇಲಿನ ಸಾಕ್ಷ್ಯಾಧಾರಗಳು ದೃಢಪಟ್ಟಿವೆ. ಈ ಹಿನ್ನೆಲೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ತೀರ್ಪು ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಿಂದ ತರೀಕೆರೆಗೆ ಹೋಗಲು ಬಸ್‌ ಹತ್ತಿದ್ದ ‌ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ಐವರು ಆರೋಪಿಗಳಿಗೆ 2 ವರ್ಷಗಳ ಕಠಿಣ ಕಾರಾವಾಸ. ₹1,90,000 ದಂಡ ವಿಧಿಸಲಾಗಿದೆ. ಇನ್ನು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 12, 2026 at 10:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 12, 2026

Leave a Comment