ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

ಶಿವಮೊಗ್ಗ: ನಗರದ ಕೃಷಿ ಕಾಲೇಜಿನ ಸಮೀಪ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಇಆರ್‌ಎಸ್‌ಎಸ್ 112 ಸಿಬ್ಬಂದಿ ರಕ್ಷಿಸಿದ್ದಾರೆ (youth’s life). ಸ್ಥಳೀಯ ಯುವಕ ಮರವೊಂದಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಳ್ಳಲು ಮುಂದಾಗಿದ್ದ.

ಇದನ್ನೂ ಓದಿ – ಕಾರ್ಗಲ್‌ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಇದನ್ನು ಗಮನಿಸಿದ್ದ ಸ್ಥಳೀಯರು 112 ಸಹಾಯವಾಣಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ವಿನೋಬನಗರ ಪೊಲೀಸ್ ಠಾಣೆಯ ಎಎಸ್‌ಐ ಹೇಮಾವತಿ ಹಾಗೂ ಇಆರ್‌ವಿ ವಾಹನದ ಚಾಲಕ ಅಣ್ಣಪ್ಪ ಯುವಕನ ರಕ್ಷಣೆಗೆ ಮಾಡಿದ್ದಾರೆ.

Youth-rescued-by-112-ERSS-Police-in-Shimoga-Navule.

ನೇಣು ಹಾಕಿಕೊಂಡು ಒದ್ದಾಡುತ್ತಿದ್ದ ಆತನನ್ನು ಕೆಳಗಿಳಿಸಿ ಪ್ರಥಮ ಚಿಕಿತ್ಸೆ ಒದಗಿಸುವ ಮೂಲಕ ಪಾರು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಆತನಿಗೆ ಬುದ್ಧಿವಾದ ಹೇಳಿ ಕುಟುಂಬಸ್ಥರೊಂದಿಗೆ ಕಳುಹಿಸಿದ್ದಾರೆ.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 12, 2026 at 12:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 12, 2026

Leave a Comment