ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು (medical PG student) ಮೃತಪಟ್ಟಿದ್ದಾರೆ. ವಾಟರ್ ಟ್ಯಾಂಕರ್ ಹಾಗೂ ದ್ವಿಚಕ್ರ  ವಾಹನ ನಡುವೆ ಅಪಘಾತ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ ಮೂಲದ ಲಾವಣ್ಯ (25) ಎಂದು ಗುರುತಿಸಲಾಗಿದೆ. ಇವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಓವೇರಿಯಾ ಎಂಬ ಮತ್ತೊಬ್ಬ ಯುವತಿಗೂ ಗಂಭೀರ ಗಾಯಗಳಾಗಿವೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Medical-Student-succumbed-to-a-mishap-at-Mc-Gann-Hospital

ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿಯೇ ಈ ದುರ್ಘಟನೆ ನಡೆದಿದೆ. ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್‌ ಲಾರಿ ನೀರು ಪೂರೈಕೆ ಮಾಡುತಿತ್ತು. ಘಟನೆಗೆ ಸಂಬಂಧ ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 12, 2026

Leave a Comment