ಶಿವಮೊಗ್ಗ: ಜಿಲ್ಲಾ ಅಬಕಾರಿ ಇಲಾಖೆಯ ವತಿಯಿಂದ ವಿವಿಧ ಪ್ರಕರಣಗಳಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ವಾಹನಗಳ ಬಹಿರಂಗ ಹರಾಜನ್ನು (auction) ಮಾರ್ಚ್ 23 ರಂದು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂಬರ್ 1ರ ಕಚೇರಿಯ ಅಬಕಾರಿ ಭವನದ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಒಂದು ನಾಲ್ಕು ಚಕ್ರದ ವಾಹನವನ್ನು ಯಥಾಸ್ಥಿತಿ ಆಧಾರದ ಮೇಲೆ ಮಾರಾಟ ಮಾಡಲಾಗುವುದು.
ಇದನ್ನೂ ಓದಿ – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ
ಹರಾಜಿನಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸಾರ್ವಜನಿಕರು ನಿಗದಿತ ಸಮಯದಲ್ಲಿ ಸ್ಥಳಕ್ಕೆ ಹಾಜರಿರಬೇಕು. ಹರಾಜಿಗಿಟ್ಟಿರುವ ವಾಹನಗಳನ್ನು ಕಚೇರಿಯ ಕೆಲಸದ ವೇಳೆಯಲ್ಲಿ ಅಬಕಾರಿ ಭವನದ ಆವರಣದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ವಲಯ ನಂ.1ರ ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








