ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗ: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ (LPG cylinder) ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮನವಿ ಮಾಡಿದ್ದಾರೆ.

ಸಿಲಿಂಡರ್‌ಗಳ ಕೊರತೆಯಾಗಲಿದೆ ಎಂಬ ಆತಂಕದಿಂದ ಗ್ರಾಹಕರು ಗಾಬರಿಗೊಳ್ಳುವ ಅಗತ್ಯವಿಲ್ಲ. ಅನಗತ್ಯವಾಗಿ ಅನಿಲ ಸಿಲಿಂಡರ್‌ಗಳನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಎಂದು ತಿಳಿಸಿದ್ದಾರೆ.

Shimoga-DC-Prabhulinga-Kavalikatti

ಬುಕ್ಕಿಂಗ್ ನಿಯಮ, ಡಿಸಿ ಹೇಳಿದ್ದೇನು?

ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯ ಬಗ್ಗೆ ಗ್ರಾಹಕರು ಈ ಕೆಳಗಿನ ಅಂಶಗಳನ್ನು ಗಮನಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

  • ಸಿಂಗಲ್ ಸಿಲಿಂಡರ್ ಗ್ರಾಹಕರು: ಒಂದು ಸಿಲಿಂಡರ್ ಪಡೆದ 25 ದಿನಗಳ ನಂತರವಷ್ಟೇ ಮುಂದಿನ ರಿಫಿಲ್ಲಿಂಗ್‌ಗಾಗಿ ಬುಕ್ಕಿಂಗ್ ಮಾಡಬೇಕು.
  • ಡಬಲ್ ಸಿಲಿಂಡರ್ ಗ್ರಾಹಕರು: ಒಂದು ಸಿಲಿಂಡರ್ ಪಡೆದ 30 ದಿನಗಳ ನಂತರವಷ್ಟೇ ಮತ್ತೊಂದು ಸಿಲಿಂಡರ್ ಬುಕ್ ಮಾಡಬೇಕು. ಇದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡದಂತೆ ಅವರು ಗ್ರಾಹಕರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ – ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಇನ್ನು, ಅಡುಗೆ ಅನಿಲ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಅಥವಾ ಮಾಹಿತಿ ಬೇಕಿದ್ದಲ್ಲಿ ಗ್ರಾಹಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೆರೆದಿರುವ ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆ 9148267229 ಮತ್ತು 9844214270.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 17, 2026 at 12:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 17, 2026

Leave a Comment