ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಹೆಗ್ಗಾರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಸಬ್ ಇನ್ಸ್‌ಪೆಕ್ಟರ್ ಸಚಿನ್ (PSI Sachin) ಅಂತ್ಯಕ್ರಿಯೆ ಸೋಮವಾರ ತಾಲೂಕಿನ ಕುಡವಳ್ಳಿಯ ಬಿಸಿಲುಮನೆ ಗ್ರಾಮದಲ್ಲಿ ನಡೆಯಿತು.
ಇದನ್ನೂ ಓದಿ – ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ನೇತೃತ್ವದಲ್ಲಿ ಪೊಲೀಸ್ ಗೌರವ ವಂದನೆ ನಡೆಯಿತು. ಈ ಸಂದರ್ಭ ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇದ್ದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ನಂತರ ಅಂತ್ಯಕ್ರಿಯೆ ನೆರವೇರಿತು.

ಇನ್ನೆರಡು ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು
ಕೆಲವು ತಿಂಗಳ ಹಿಂದೆ ಸಚಿನ್ ಅವರ ತಂದೆ ನಿಧನರಾಗಿದ್ದರು. ಬಡತನದಲ್ಲಿಯೇ ಬೆಳೆದು ಬಂದಿದ್ದ ಸಚಿನ್ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಪರೀಕ್ಷೆ ಬರೆದು ಸಬ್ ಇನ್ಸ್‌ಪೆಕ್ಟರ್ ಹುದ್ದೆಗೇರಿದ್ದರು. ಮೇ 10ರಂದು ಸಚಿನ್ ಅವರ ಮದುವೆ ನಿಶ್ಚಯವಾಗಿತ್ತು. ಸಚಿನ್ ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.



LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು














