ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗ: ನಗರದ ಸನ್‌ರೈಸ್ ಫೆಸಿಲಿಟಿ ಸರ್ವಿಸಸ್ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ (various jobs) ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರಿಗೆ ಇದು ಉತ್ತಮ ಅವಕಾಶವಾಗಿದೆ.

ಯಾವ್ಯಾವ ಹುದ್ದೆಗಳಿವೆ?

ಹೌಸ್ ಕೀಪಿಂಗ್ ಸೂಪರ್‌ವೈಸರ್, ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ವಿಭಾಗಕ್ಕೆ ಫೀಲ್ಡ್ ಆಫೀಸರ್, ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ಆಪರೇಷನ್ಸ್ ವಿಭಾಗಕ್ಕೆ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

Shivamogga-Job-Update

ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಮಾಸಿಕ ₹20,000 ರಿಂದ ₹50,000 ವರೆಗೆ ವೇತನ ನೀಡಲಾಗುವುದು. ಇದರೊಂದಿಗೆ ಉದ್ಯೋಗಿಗಳಿಗೆ ಇಎಸ್ಐ (ESI), ಪಿಎಫ್ (PF) ಸೌಲಭ್ಯ ಹಾಗೂ ವಸತಿ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ಮೊಬೈಲ್ ಸಂಖ್ಯೆ 94820 16888 ಅಥವಾ 97420 16888 ಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ – ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 17, 2026 at 8:01 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 17, 2026

Leave a Comment