ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ರಿಪ್ಪನ್‌ಪೇಟೆ: ಪಟ್ಟಣದ ಸಾಗರ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯ ಸಮೀಪ ಹೆಜ್ಜೇನುಗಳು (Honeybees) ದಾಳಿ ನಡೆಸಿವೆ. ಘಟನೆಯಲ್ಲಿ ಬ್ಯಾಂಕ್ ಉದ್ಯೋಗಿ ಸೇರಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಗ್ಗೆ 9:30ರ ಹೊತ್ತಿಗೆ ಹೆಜ್ಜೇನುಗಳು ದಾಳಿ ನಡೆಸಿವೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೀವ್ರ ಆತಂಕಕ್ಕೊಳಗಾದರು. ಮರದಲ್ಲಿದ್ದ ಹೆಜ್ಜೇನುಗಳು ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಏಕಾಏಕಿ ದಾಳಿ ಮಾಡಿವೆ.

Bee-attack-on-Bank-Employee-and-students

Bee-attack-on-Bank-Employee-and-students

ಎಸ್‌ಬಿಐ ಬ್ಯಾಂಕ್ ಉದ್ಯೋಗಿ ತೌಸಿಫ್ ಎಂಬುವವರ ಮೇಲೆ ಸುಮಾರು 30ಕ್ಕೂ ಹೆಚ್ಚು ಹೆಜ್ಜೇನುಗಳು ದಾಳಿ ಮಾಡಿವೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಹಾಲ್‌ ಟಿಕೆಟ್‌ ಪಡೆಯಲು ಹೋಗುತ್ತಿದ್ದರು

Sunrise Facility Services, Sri sai Trust Shimoga

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಈ ದಾಳಿಗೆ ತುತ್ತಾಗಿದ್ದಾರೆ. ಸರ್ಕಾರಿ ಬಾಲಕರ ಪಾಠಶಾಲೆಯ ಓರ್ವ ವಿದ್ಯಾರ್ಥಿ, ಇಬ್ಬರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಓರ್ವ ಪದವಿ ಕಾಲೇಜು ವಿದ್ಯಾರ್ಥಿ ಮೇಲೆ ಹೆಜ್ಜೇನು ದಾಳಿ ಮಾಡಿವೆ. ಗಾಯಾಳು ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದೆ. ಅವರೆಲ್ಲ ಆರೋಗ್ಯವಾಗಿದ್ದಾರೆ. ಘಟನೆಯಾದ ತಕ್ಷಣ ಸ್ಥಳೀಯರು ಮತ್ತು ವರ್ತಕರು ಹೊಗೆ ಹಾಕಿ ಹೆಜ್ಜೇನುಗಳನ್ನು ಓಡಿಸಲು ಪ್ರಯತ್ನಿಸಿದರು. ಇದರಿಂದ ಮತ್ತಷ್ಟು ಹಾನಿ ತಪ್ಪಿದಂತಾಗಿದೆ.

Leave a Comment