ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಸಾಗರ: ತಾಲೂಕಿನ ಕುಡಿಗೆರೆ ಗ್ರಾಮದಲ್ಲಿ  ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲು (Laterite Stone) ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಅಕ್ರಮ ಚಟುವಟಿಕೆಯಿಂದ ಸರ್ಕಾರಕ್ಕೆ ಸುಮಾರು ₹1,42,800 ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಲಾರಿಯಲ್ಲಿ ಜಂಬಿಟ್ಟಿಗೆ ಕಲ್ಲುಗಳನ್ನು ತುಂಬಲಾಗುತ್ತಿತ್ತು. ಅಧಿಕಾರಿಗಳನ್ನು ಕಂಡೊಡನೆ ಲಾರಿ ಚಾಲಕ ಮತ್ತು ಅಲ್ಲಿದ್ದವರು ವಾಹನ ಬಿಟ್ಟು ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

281123-Anandapura-Police-Station-Board.webp

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಅಕ್ರಮ ಗಣಿಗಾರಿಕೆ ಸಂಬಂಧ ಜಮೀನು ಮಾಲೀಕ, ಲಾರಿ ಮಾಲೀಕ, ಚಾಲಕ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment