ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗ: ಜಿಲ್ಲೆಯಲ್ಲಿ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ಸರ್ವೇಕ್ಷಣಾ ಸಂಸ್ಥೆ (ಜಿಎಸ್‌ಐ) ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿತು. ಇತ್ತೀಚೆಗಷ್ಟೇ ಹಾವೇರಿ ಜಿಲ್ಲೆಯಲ್ಲಿ ಇದೇ ಮಾದರಿಯ ಸಮೀಕ್ಷೆ ನಡೆದಿದ್ದು, ಇದೀಗ ಶಿವಮೊಗ್ಗದಲ್ಲಿಯೂ ವಿಮಾನ ಹಾರಾಟ (low-flying aircraft) ನಡೆಸಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ – ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಬುಧವಾರ ಮಧ್ಯಾಹ್ನ ಶಿವಮೊಗ್ಗದಲ್ಲಿ ಹಾರಾಟ ನಡೆಸಿದ ಈ ವಿಶೇಷ ವಿಮಾನವು ಮಂಗಳೂರು ಮತ್ತು ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಆಗಮಿಸಿ, ಅಲ್ಲಿಂದ ದಾವಣಗೆರೆವರೆಗೆ ಸಂಚರಿಸಿ ಮರಳಿತು. ಒಟ್ಟು ಎರಡು ಬಾರಿ ಈ ಹಾರಾಟ ನಡೆಸಲಾಗಿದ್ದು, ಭೂಮಿಯಿಂದ ಕೇವಲ 2,000 ಅಡಿ ಎತ್ತರದಲ್ಲಿ ವಿಮಾನ ಸಂಚರಿಸಿತು.

Low-Flying-Aircraft-in-Shimoga

ರಾಷ್ಟ್ರೀಯ ಭೂ ಭೌತಿಕ ಮ್ಯಾಪಿಂಗ್ ಕಾರ್ಯಕ್ರಮದ ಅಡಿಯಲ್ಲಿ ಜಿಎಸ್‌ಐ ಈ ಕಾರ್ಯಾಚರಣೆ ಹಮ್ಮಿಕೊಂಡಿದೆ. ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಈ ವಿಮಾನವು ಭೂಮಿಯ ಆಳದಲ್ಲಿರುವ ಚಿನ್ನ ಸೇರಿದಂತೆ ವಿವಿಧ ನೈಸರ್ಗಿಕ ಖನಿಜಗಳ ಇರುವಿಕೆಯನ್ನು ಪತ್ತೆ ಮಾಡುತ್ತದೆ. ಸ್ಯಾಟ್‌ಲೈಟ್ ಮೂಲಕ ದೊರೆತ ಪ್ರಾಥಮಿಕ ಮಾಹಿತಿಯನ್ನು ಆಧರಿಸಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಅತ್ಯಂತ ಕಡಿಮೆ ಎತ್ತರದಲ್ಲಿ ವಿಮಾನ ಹಾರಾಟ ನಡೆಸುತ್ತಿರುವುದರಿಂದ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Sunrise Facility Services, Sri sai Trust Shimoga
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 19, 2026 at 11:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 19, 2026

Leave a Comment